Tuesday, 8 December 2020

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೂಡಲೇ ಕಾಮಗಾರಿ ಕೈಗೊಳ್ಳಿ : ಸಿಎಂ ಬಿಎಸ್ ವೈಗೆ ಪತ್ರ ಬರೆದ ಸಿದ್ದರಾಮಯ್ಯ


ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೂಡಲೇ ಕಾಮಗಾರಿ ಕೈಗೊಳ್ಳಿ : ಸಿಎಂ ಬಿಎಸ್ ವೈಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿ.ಎಸ್. ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯ ಪತ್ರದಲ್ಲಿ, ಪ್ರಸಕ್ತ ವರ್ಷ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1,500 ಕೋಟಿ ರೂ. ಘೋಷಣೆ ಮಾಡಲಾಗಿದೆ. ಆದರೆ ಕಾಮಗಾರಿ ಯೋಜನೆಗಳಿಗೆ ಅನುಮೋದನೆ ನೀಡಿಲ್ಲ. ಇದನ್ನು ನೋಡಿದರೆ ನಿರ್ಲಕ್ಷ್ಯ ಮಾಡಿರುವಂತೆ ಕಾಣುತ್ತಿದೆ. ಪ್ರಸಕ್ತ ವರ್ಷ ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯ ಮಾಡುತ್ತಿದೆ. ಯುಪಿಎ ಸರ್ಕಾರ 371 ಜೆ ನೀಡಿತ್ತು. ಆದರೆ ಪ್ರಸಕ್ತ ಸರ್ಕಾರವು ಅದರ ಮೂಲ ಉದ್ದೇಶ ಮರೆತಂತಿದೆ. ಹೀಗಾಗಿ ಕೂಡಲೇ ಕ್ರಿಯಾ ಯೋಜನೆಗಳನ್ನು ಅನುಮೋದಿಸಿ, ಟೆಂಡರ್ ಕರೆದು ಗುಣಮಟ್ಟದ ಕಾಮಗಾರಿ ಕೈಗೊಳ್ಳಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 


SHARE THIS

Author:

0 التعليقات: