ಕಾಂಗ್ರೆಸ್ ಈಗ ಸದನದ ಒಳಗೂ ಗುಂಡಾಗಿರಿ ಮಾಡುತ್ತಿದೆ : ನಳೀನ್ ಕುಮಾರ್ ಕಟೀಲ್
ಮಂಗಳೂರು : ಕಾಂಗ್ರೆಸ್ ವಿಧಾನಪರಿಷತ್ ನಲ್ಲಿ ಗೂಂಡಾಗಿರಿ ವರ್ತನೆ ತೋರಿದ್ದು, ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ವಿಧಾನ ಪರಿಷತ್, ವಿಧಾನಸಭೆ ಹೊರಗೆ ಗೂಂಡಾಗಿರಿ ಮಾಡುತ್ತಿತ್ತು. ಇದೀಗ ಒಳಗೂ ಗುಂಡಾಗಿರಿ ಪ್ರದರ್ಶಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಹೀಗಾಗಿ ಕಾಂಗ್ರೆಸ್ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
0 التعليقات: