Thursday, 17 December 2020

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ `ಬೆಳ್ಳಿ ಹೆಲಿಕಾಪ್ಟರ್' ಕಾಣಿಕೆ ನೀಡಿದ ಡಿಕೆಶಿ!


 ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ `ಬೆಳ್ಳಿ ಹೆಲಿಕಾಪ್ಟರ್' ಕಾಣಿಕೆ ನೀಡಿದ ಡಿಕೆಶಿ!

ಬಳ್ಳಾರಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.

ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಕ್ಕೆ 2018 ರಲ್ಲಿ ಹೆಲಿಕಾಪ್ಟರ್ ನಲ್ಲಿ ಬಂದು ಹೋದ ಬಳಿಕ ಹಲವು ಸಮಸ್ಯೆಗಳು ಉಂಟಾದ ಹಿನ್ನೆಲೆಯಲ್ಲಿ ದೇವಾಲಯದ ಗುರುಗಳ ಸಲಹೆ ಮೇರೆಗೆ ಡಿ.ಕೆ.ಶಿವಕುಮಾರ್ ಅವರು ಇಂದು ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿದ್ದಾರೆ.

ಇಂದು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು, ಮೈಲಾರಲಿಂಗ ದೇಗುಲಕ್ಕೆ ಬೆಳ್ಳಿ ಹೆಲಿಕಾಪ್ಟರ್ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.



SHARE THIS

Author:

0 التعليقات: