ಭಾರತದಲ್ಲಿ ಕೋಟಿಯತ್ತ ದಾಪುಗಾಲಿಟ್ಟ ಕೊರೊನಾ ಸೋಂಕಿತರ ಸಂಖ್ಯೆ..!
ನವದೆಹಲಿ, ಡಿ.5-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಕಳೆದ 24 ಗಂಟೆಗಳಲ್ಲಿ 36,652 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ಸೋಂಕಿತರ ಸಂಖ್ಯೆ 96.08,211 ಗಡಿ ದಾಟಿದ್ದು, ಕೋಟಿಯತ್ತ ಮುಖ ಮಾಡಿದೆ.
ಆದಾಗ್ಯೂ, 90ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.94.28ಕ್ಕೇ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಂಕಿ ಅಂಶಗಳು ದೃಢಪಡಿಸಿವೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ ಶೇ.1.45ಕ್ಕೆ ಕುಸಿದಿರುವುದು ಸಮಾಧಾನಕರ ವಿಷಯವಾಗಿದೆ.
ಪ್ರಸ್ತುತ ದೇಶದಲ್ಲಿ 4,09,689 ಸಕ್ರಿಯ ಪ್ರಕರಣಗಳಿವೆ. ಒಟ್ಟಾರೆ, ಕೊರೊನಾ ಸೋಂಕು ಕ್ಷೀಣಿಸುತ್ತಿದ್ದರೂ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿರುವುದು ಅತಂಕಕ್ಕೆ ಎಡೆ ಮಾಡಿಕೊಟ್ಟಿದೆ.
0 التعليقات: