'ರಿಪಬ್ಲಿಕ್ ಸಿಇಒ ವಿಕಾಸ್ ಖನ್ಚಾಂದಾನಿ'ಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು
ಮುಂಬೈ : ಟಿ ಆರ್ ಪಿ ತಿರುಚಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧಿಸಲ್ಪಟ್ಟು, ಜೈಲು ಸೇರಿದ್ದಂತ ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ಸಿಇಒ ವಿಕಾಸ್ ಖನ್ಚಾಂದಾನಿ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.
ಟಿಆರ್ ಪಿ ತಿರುಚಿದ ಪ್ರಕರಣದಲ್ಲಿ ಭಾನುವಾರ ಬೆಳಗ್ಗೆ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ನಿಂದ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ 2 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಕಳೆದ ನಂತರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಮರುದಿನವೇ ಈ ಬೆಳವಣಿಗೆ ನಡೆದಿದೆ. ತಲೋಜಾ ಜೈಲಿನಲ್ಲಿ ರಾತ್ರಿ ಕಳೆದ ನಂತರ ವಿಕಾಸ್ ಖನ್ಚಾಂದಾನಿ ಇಂದು ಸಂಜೆ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ.
ಸೋಮವಾರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಾಗಿದ್ದರೂ, ಡಿಸೆಂಬರ್ 13ರಂದು ಬೆಳಗ್ಗೆ 8.30ಕ್ಕೆ ನಕಲಿ ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ವಿಕಾಸ್ ಖನ್ಚಾಂದನಿ ಅವರನ್ನು ಅವರ ನಿವಾಸದಿಂದ ಬಂಧಿಸಲಾಗಿತ್ತು. ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ 26 ದಿನಗಳ ಕಾಲ ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
ಮುಂಬೈ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಿದ ನಂತರ ಪೊಲೀಸರು 14 ದಿನಗಳ ಕಾಲ ಆತನನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಡಿಸೆಂಬರ್ 15ರವರೆಗೆ ರಿಪಬ್ಲಿಕ್ ಸಿಇಒ ಅವರನ್ನು ಕೋರ್ಟ್ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಅದು ಮುಗಿದ ನಂತರ ನ್ಯಾಯಾಲಯ ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ಬಳಿಕ, ಇಂದು ಮುಂಬೈ ಕೋರ್ಟ್ ನಿಂದ ಜಾಮೀನು ಮಂಜೂರು ಮಾಡಲಾಗಿದೆ.
0 التعليقات: