Thursday, 10 December 2020

ಜೆ.ಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ : ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ; ಅಮಿತ್ ಶಾ


ಜೆ.ಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ : ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ; ಅಮಿತ್ ಶಾ

ಡಿಜಿಟಲ್ ಡೆಸ್ಕ್ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಬಿಜೆಪಿ ಜನರಲ್ ಸೆಕ್ರೆಟರಿ ಕೈಲಾಶ್ ವಿಜಯ್ ವರ್ಗಿಯಾರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಭಾರೀ ಖಂಡನೆ ವ್ಯಕ್ತವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ 'ನಡ್ಡಾ ಅವರ ಬೆಂಗಾವಲು ವಾಹನ ಮೇಲೆ ನಡೆಸಿದ ದಾಳಿ ಖಂಡನೀಯ, ಈ ದಾಳಿಯನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ನೋಡುತ್ತಿದೆ. ಈ ಘಟನೆ ಸಂಬಂಧ ಬಂಗಾಳ ಸರ್ಕಾರ ಜನರಿಗೆ ಉತ್ತರ ನೀಡಬೇಕಾಗುತ್ತದೆ' ಎಂದಿದ್ದಾರೆ.

ಇನ್ನೂ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ ' ಪಶ್ಚಿಮ ಬಂಗಾಳದಲ್ಲಿರುವ ನಮ್ಮ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಘಟನೆ ಬಳಿಕ ಅವರ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿಸಿದೆ. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿ ಕೂಲಂಕಷವಾಗಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.SHARE THIS

Author:

0 التعليقات: