Friday, 25 December 2020

ತಮಿಳುನಾಡು ಚುನಾವಣೆಗೂ ಮುನ್ನವೇ ನಟ ಕಮಲ್ ಹಾಸನ್ ಗೆ ಭಾರೀ ಹಿನ್ನಡೆ


ತಮಿಳುನಾಡು ಚುನಾವಣೆಗೂ ಮುನ್ನವೇ ನಟ ಕಮಲ್ ಹಾಸನ್ ಗೆ ಭಾರೀ ಹಿನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದ ಮಕ್ಕಳ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಸಂಸ್ಥಾಪಕ, ನಟ ಕಮಲ್ ಹಾಸನ್ ಅವರಿಗೆ ಭಾರೀ ಹಿನ್ನಡೆಯಾಗಿದೆ. ಕಮಲ್ ಹಾಸನ್ ಅವರ ಆಪ್ತ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಎಂಎನ್‌ಎಂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರುಣಾಚಲಂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಮಲ್ ಹಾಸನ್ ಪಕ್ಷದ ಇನ್ನಷ್ಟು ಜನರನ್ನು ಬಿಜೆಪಿ ತನ್ನತ್ತ ಸೆಳೆಯಲು ಮುಂದಾಗಿದೆ ಎನ್ನಲಾಗಿದೆ.

2021ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಟ ಕಮಲ್ ಹಾಸನ್ ಈಗಗಾಲೇ ಭರ್ಜರಿ ಸಿದ್ಧತೆ ನಡೆಸಿದ್ದು, ತಮ್ಮ ಮಕ್ಕಳ ನೀಧಿ ಮಯ್ಯಂ ಪಕ್ಷದ ವತಿಯಿಂದ ಚುನಾವಣಾ ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಈ ನಡುವೆಯೇ ಪಕ್ಷದ ಪ್ರಧಾನ ಕಾರ್ಯದರ್ಶಿ ಏಕಾಏಕಿ ಬಿಜೆಪಿಗೆ ಸೇರ್ಪಡೆಯಾಗಿರುವುದು ಕಮಲ್ ಹಾಸನ್ ಅವರಿಗೆ ಭಾರೀ ಹಿನ್ನಡೆಯಾದಂತಾಗಿದೆ.


SHARE THIS

Author:

0 التعليقات: