Thursday, 17 December 2020

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿ


 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ಗುಂಡಿನ ದಾಳಿ

ಬೆಳಗಾವಿ, ಡಿ.17 (ಹಿ.ಸ) : ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಾದ ಕಿರಣ್ ರಜಪೂತ್ ಹಾಗೂ ಭರಮಾ ದೂಪದಾಳೆ ಮೇಲೆ ಫೈರಿಂಗ್ ಮಾಡಲಾಗಿದೆ. ಘಟನೆಯಲ್ಲಿ ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಜಪೂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿಕೊಂಡು ಬಂದಿದ್ದ ದುಷ್ಕರ್ಮಿಗಳು ಸುಮಾರು 7 ಅಡಿ ದೂರದಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಂಗ್ರೆಸ್​ ಕಾರ್ಯಕರ್ತ ಕಿರಣ್ ರಜಪೂತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


SHARE THIS

Author:

0 التعليقات: