Thursday, 31 December 2020

ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವರ್ಗಾವಣೆ


ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವರ್ಗಾವಣೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರಿಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಶಶಿ ಕುಮಾರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

2020ರ ಜುಲೈ 29ಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದ ವಿಕಾಸ್ ಕುಮಾರ್ ಅವರಿಗೆ ಕೇವಲ 6 ತಿಂಗಳಲ್ಲಿ ವರ್ಗಾವಣೆ ಆಗಿದೆ. ವಿಕಾಸ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ನಿಯುಕ್ತಿಗೊಳಿಸಲಾಗಿದೆ.

ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಆಗಿದ್ದ ಐಪಿಎಸ್ ಅಧಿಕಾರಿ ರಂಜಿತ್ ಕುಮಾರ್ ಬಂದಾರು ಅವರನ್ನು ಭಟ್ಕಳ ಉಪವಿಭಾಗದ ಎಎಸ್ಪಿ ಆಗಿ ನಿಯುಕ್ತಿಗೊಳಿಸಲಾಗಿದೆ.



SHARE THIS

Author:

0 التعليقات: