Wednesday, 9 December 2020

ನೂತನ ಸಂಸತ್‌ ಭವನಕ್ಕೆ ಇಂದು ಪ್ರಧಾನಿ ಮೋದಿಯಿಂದ ಶಂಕುಸ್ಥಾಪನೆ


ನೂತನ ಸಂಸತ್‌ ಭವನಕ್ಕೆ ಇಂದು ಪ್ರಧಾನಿ ಮೋದಿಯಿಂದ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್‌ ಭವನದ ಕಟ್ಟಡಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ.

ಸಂಸತ್‌ ಭವನದ ಆವರಣದಲ್ಲಿರುವ ನಿಯೋಜಿತ ಸ್ಥಳದಲ್ಲಿ ಮಧ್ಯಾಹ್ನ 12,50ಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಅಡಿಗಲ್ಲು ಹಾಕಲಿದ್ದು, ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

64,500 ಚದರ ಮೀಟರ್‌ ವಿಸ್ತೀರ್ಣದ ಈ ಕಟ್ಟ‌ಡ ನಿರ್ಮಾಣಕ್ಕೆ ಸುಮಾರು ₹971 ಕೋಟಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಭೂಕಂಪನ ನಿರೋಧಕ ವ್ಯವಸ್ಥೆಯಡಿ ಇದನ್ನು ನಿರ್ಮಿಸಲಾಗುತ್ತಿದೆ. ನೂರು ವರ್ಷದ ಹಳೆಯ ಕಟ್ಟಡಕ್ಕೆ ಯಾವುದೇ ಹಾನಿಯಾಗದಂತೆಯೂ ನೋಡಿಕೊಳ್ಳಲಾಗುತ್ತದೆ' ಎಂದು ತಿಳಿಸಲಾಗಿದೆ.



SHARE THIS

Author:

0 التعليقات: