ಗ್ರಾಮಪಂಚಾಯಿತಿ ಚುನಾವಣೆ : ಬಿಜೆಪಿ ಬೆಂಬಲಿತ
ಅಭ್ಯರ್ಥಿಗಳಿಗೆ ಭರ್ಜರಿ ಮುನ್ನಡೆ
ಬೆಂಗಳೂರು : ಇಂದು ಗ್ರಾಮಪಂಚಾಯಿತಿ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಶುರುವಾಗಿದೆ.
ಸದ್ಯದ ಮಾಹಿತಿ ಪ್ರಕಾರ ರಾಜ್ಯದ 5,728 ಒಟ್ಟು ಗ್ರಾಮಪಂಚಾಯಿತಿಗಳ ಪೈಕಿ 3,427 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 1,583 ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು 599, ಇತರೆ 448 ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ 5,728 ಗ್ರಾಮಪಂಚಾಯಿತಿಗಳಿಗೆ ಈಗಾಗಲೇ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಶುರುವಾಗಿದ್ದು, ತಡರಾತ್ರಿಯವರೆಗೆ ವೇಳೆ ಸಂಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ.
0 التعليقات: