Wednesday, 9 December 2020

ರಾಜ್ಯ ಸರ್ಕಾರದಿಂದ `ಅಂಗನವಾಡಿ ಕಾರ್ಯಕರ್ತೆಯರಿಗೆ' ಭರ್ಜರಿ ಸಿಹಿಸುದ್ದಿ


 ರಾಜ್ಯ ಸರ್ಕಾರದಿಂದ `ಅಂಗನವಾಡಿ ಕಾರ್ಯಕರ್ತೆಯರಿಗೆ' ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರಿ ನೌಕರ ಸ್ಥಾನ ನೀಡುವ ಕುರಿತು ವಿಧಾನಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಸಚಿವೆ ಶಶಿಕಲಾ ಜೊಲ್ಲೆ ಪ್ರಸ್ತಾಪ ಮಾಡಿದ್ದಾರೆ.

ರಾಜ್ಯದಲ್ಲಿ 65 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, 62 ಸಾವಿರ ಸಹಾಯಕಿಯರು ಇದ್ದಾರೆ. ಕೇಂದ್ರದ ಶೇ. 60 ರಷ್ಟು, ರಾಜ್ಯದ ಶೇ. 40 ರಷ್ಟು ಅನುದಾನದಿಂದ ವೇತನ ನೀಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸರ್ಕಾರಿ ನೌಕರಿಗೆ ಸೇರ್ಪಡೆ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಈ ಬಗ್ಗೆ ರಾಜ್ಯದಲ್ಲೂ ಅಧ್ಯಯನ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ನಿವೃತ್ತಿ ಪೆನ್ಷನ್ ಹೆಚ್ಚಳ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಸಚಿವೆ ಶಶಿಕಲಾ ಜೊಲ್ಲೆ, ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರಿಗೆ 30 ರಿಂದ 80 ಸಾವಿರ ರೂ. ನಿವೃತ್ತಿ ಪನ್ಷನ್ ನೀಡುತ್ತಿದ್ದೇವೆ. ಪಿಂಚಣಿ ಹೆಚ್ಚಳದ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.SHARE THIS

Author:

0 التعليقات: