ಮೋದಿ ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ: ಮಮತಾ ಬ್ಯಾನರ್ಜಿ..!
ಡಿಜಿಟಲ್ ಡೆಸ್ಕ್: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರಾಜ್ಯದಲ್ಲಿ ಅನುಷ್ಠಾನಗೊಳ್ಳದೆ ಇರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಮಾಹಿತಿ ನೀಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಬದಲು ರೈತರ ಬಗ್ಗೆ ಕಾಳಜಿ ಯನ್ನ ಪ್ರದರ್ಶಿಸಿದ್ದಾರೆ ಎಂದು ವ್ಯಂಗ್ಯವಾಡಿದ ಅವ್ರು, 'ಅವರು (ಪಿಎಂ ಮೋದಿ) ತಮ್ಮ ಪಿಎಂ ಕಿಸಾನ್ ಯೋಜನೆ ಮೂಲಕ (ಪಶ್ಚಿಮ ಬಂಗಾಳ) ರೈತರಿಗೆ ಸಹಾಯ ಮಾಡುವ ಉದ್ದೇಶವನ್ನ ಬಹಿರಂಗವಾಗಿ ಹೇಳಿಕೊಂಡಿದ್ದರೂ ಮತ್ತು ರಾಜ್ಯ ಸರ್ಕಾರದ ಅಸಹಕಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಆದರೆ ಅವರು ಅರ್ಧ ಸತ್ಯ ಮತ್ತು ತಿರುಚಿದ ಸತ್ಯಗಳಿಂದ ಜನರಿಗೆ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
0 التعليقات: