Wednesday, 16 December 2020

ಗಡಿಯಲ್ಲಿ ಪಾಕ್‌ನಿಂದ ಕದನವಿರಾಮ ಉಲ್ಲಂಘನೆ: ಪಾಕ್ ಸೇನೆಯ ಇಬ್ಬರ ಹತ್ಯೆ


 ಗಡಿಯಲ್ಲಿ ಪಾಕ್‌ನಿಂದ ಕದನವಿರಾಮ ಉಲ್ಲಂಘನೆ: ಪಾಕ್ ಸೇನೆಯ ಇಬ್ಬರ ಹತ್ಯೆ

ಶ್ರೀನಗರ, ಡಿಸೆಂಬರ್ 16: ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನವು ಕದನವಿರಾಮ ಉಲ್ಲಂಘನೆ ಮಾಡಿ ಶೆಲ್ ದಾಳಿ ನಡೆಸಿದ್ದು, ಘಟನೆಯಲ್ಲಿ ಪಾಕಿಸ್ತಾನ ಸೇನೆಯ ಇಬ್ಬರನ್ನು ಹತ್ಯೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದರು. ಭಾರತೀಯ ಸೇನಾಪಡೆಯು ಇಬ್ಬರು ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಡಿಸೆಂಬರ್ 13 ರಂದೂ ಕೂಡ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಮುಗ್ದ ನಾಗರೀಕರನ್ನು ಗುರುಯಾಗಿರಿಸಿಕೊಂಡು ದಾಳಿ ನಡೆಸಿತ್ತು. ಈ ವೇಳೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿತ್ತು ಎಂದು ಲೆಫ್ಟಿನೆಂಟ್ ಜನರಲ್ ಸತೀಂದರ್ ಕುಮಾರ್ ಸೈನಿಯವರು ಹೇಳಿದ್ದಾರೆ.

ಕಳೆದ ರಾತ್ರಿ ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ದಾಳಿಗೆ ತಕ್ಕ ಉತ್ತರ ನೀಡಿ ಇಬ್ಬರು ಪಾಕಿಸ್ತಾನ ಸೇನೆಯ ಯೋಧರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾಪಡೆ ಮಾಹಿತಿ ನೀಡಿದೆ.


SHARE THIS

Author:

0 التعليقات: