ಕಾಂಗ್ರೆಸ್ ತೊರೆಯದಂತೆ ಇಬ್ರಾಹಿಂಗೆ ಡಿಕೆಶಿ ಮನವಿ
ಬೆಂಗಳೂರು: ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದ ಕೇಂದ್ರದ ಮಾಜಿ ಸಚಿವ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಪಕ್ಷ ತೊರೆಯದಂತೆ ಮನವಿ ಮಾಡಿಕೊಂಡಿದ್ದಾರೆ.
ಶನಿವಾರ ರಾತ್ರಿ ಬೆನ್ಸೆನ್ ಟೌನ್ನಲ್ಲಿರುವ ಸಿ.ಎಂ.ಇಬ್ರಾಹಿಂ ಅವರ ನಿವಾಸಕ್ಕೆ ಭೇಟಿ ನೀಡಿ ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಭವಿಷ್ಯದಲ್ಲಿ ಕಾಂಗ್ರೆಸ್ನಲ್ಲಿ ಉತ್ತಮ ಅವಕಾಶಗಳಿದ್ದು, ಪಕ್ಷದ ಕೆಲವು ನಾಯಕರ ಬಗ್ಗೆ ನಿಮಗಿರುವ ಅಭಿಪ್ರಾಯವನ್ನು ಗಮನಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷ ತಮ್ಮ ಸಾಮರ್ಥ್ಯವನ್ನು ಸದುಪಯೋಗ ಪಡಿಸಿಕೊಳ್ಳುತ್ತದೆಂಬ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಮಾತನಾಡುವ ವಿಚಾರದಲ್ಲಿ ಕಾಂಗ್ರೆಸ್ನ ಕೆಲವು ನಾಯಕರು ಪರೋಕ್ಷವಾಗಿ ಅವರ ಜೊತೆಗಿದ್ದಾರೆ ಎನ್ನುವ ಹೇಳಿಕೆ ಬಗ್ಗೆ ಡಿ.ಕೆ.ಶಿವಕುಮಾರ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
0 التعليقات: