ಸಂಸತ್ ಭವನದ ಭೂಮಿ ಪೂಜೆ : ಐತಿಹಾಸಿಕ ಭಾಷಣದಲ್ಲಿ ಅನುಭವ ಮಂಟಪ ಸ್ಮರಿಸಿದ್ರು ಪ್ರಧಾನಿ ಮೋದಿ
ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆಯನ್ನು ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಐತಿಹಾಸಿಕ ಭಾಷಣದಲ್ಲಿ ಕರ್ನಾಟಕದ ಬಸವಣ್ಣನವರ ಅನುಭವ ಮಂಟದ ಧ್ಯೇಯ, ಉದ್ದೇಶವನ್ನು ಕನ್ನಡದಲ್ಲಿಯೇ ಸ್ಮರಿಸಿಕೊಂಡು ಕನ್ನಡಿಗರ ಗಮನಸೆಳೆದರು.
ಒಬ್ಬ ಸಂಸದನಾಗಿ 2014ರಲ್ಲಿ ಮೊಟ್ಟ ಮೊದಲ ಬಾರಿ ಸಂಸತ್ ಭವನ ಪ್ರವೇಶಿಸಿದ ಆ ಸಂದರ್ಭ ನನ್ನ ಬದುಕಿನ ಅವಿಸ್ಮರಣೀಯವಾದುದು. ಪ್ರಜಾಪ್ರಭುತ್ವದ ದೇಗುಲವನ್ನು ಪ್ರವೇಶಿಸುವ ಮೊದಲು ನಾನು ತಲೆಬಾಗಿ ನಮಸ್ಕರಿಸಿದ್ದೇನೆ, ಗೌರವ ಸಲ್ಲಿಸದ್ದೇನೆ. ಈ ದಿನ 130 ಕೋಟಿಗೂ ಅಧಿಕ ಭಾರತೀಯರಿಗೆ ಹೆಮ್ಮೆಯ ದಿನವಾಗಿದ್ದು, ನಾವೆಲ್ಲರೂ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದೇವೆ.
ಹೊಸ ಸಂಸತ್ ಭವನದ ಆವರಣವು ಹಳೆಯ ಮತ್ತು ಹೊಸ ಕಟ್ಟಡಗಳನ್ನು ಒಳಗೊಂಡಿರಲಿದೆ. ಹಳೆಯ ಸಂಸತ್ ಭವನ ದೇಶದ ಕಾಲಕಾಲದ ಅಗತ್ಯಗಳನ್ನು ಪೂರೈಸುವುದಕ್ಕೆ ಬಳಕೆಯಾಗಲಿದ್ದು, ಹೊಸ ಸಂಸತ್ ಭವನದಲ್ಲಿ ದೇಶವನ್ನು ಭವಿಷ್ಯದತ್ತ ಕೊಂಡೊಯ್ಯುವ ಚಾಲನಾ ಶಕ್ತಿ ಒದಗಿಸಲಿದೆ. ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ.
0 التعليقات: