ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಧನ್ಯವಾದಗಳು ಕೇರಳ, ಎಲ್ಡಿಎಫ್ನಲ್ಲಿ ಮತ್ತೆ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.
ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಸಿಪಿಐ (ಎಂ) ನೇತೃತ್ವದ ಎಡಪಕ್ಷಗಳ ಒಕ್ಕೂಟ ಮತ ಎಣಿಕೆ ಆರಂಭವಾದಾಗಿನಿಂದ ಇಲ್ಲಿಯವರೆಗೂ ಮುನ್ನಡೆ ಕಾಯ್ದುಕೊಂಡಿದೆ.
ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವೆಂದೆ ಪರಿಗಣಿಸಲಾಗಿದೆ.
0 التعليقات: