Monday, 28 December 2020

'ಹೊಸ ವರ್ಷದ ಮಾರ್ಗಸೂಚಿ ಉಲ್ಲಂಘಿಸಿದ್ರೆ ಹುಷಾರ್'..ಬೀಳುತ್ತೆ ಕೇಸ್ : ಪೊಲೀಸ್ ಆಯುಕ್ತ 'ಕಮಲ್ ಪಂತ್' ಎಚ್ಚರಿಕೆ


'ಹೊಸ ವರ್ಷದ ಮಾರ್ಗಸೂಚಿ ಉಲ್ಲಂಘಿಸಿದ್ರೆ ಹುಷಾರ್'..ಬೀಳುತ್ತೆ ಕೇಸ್ : ಪೊಲೀಸ್ ಆಯುಕ್ತ 'ಕಮಲ್ ಪಂತ್' ಎಚ್ಚರಿಕೆ

ಬೆಂಗಳೂರು : ಹೊಸ ವರ್ಷದ ಮಾರ್ಗಸೂಚಿ ಉಲ್ಲಂಘಿಸಿದ್ರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್ 31 ರಂದು ಬೆಳಗ್ಗೆ 6 ರಿಂದ ಜನವರಿ 1 ರಂದು ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಹೊಸ ವರ್ಷಾಚರಣೆ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ರಸ್ತೆಯಲ್ಲಿ ಹೊಸವರ್ಷಾಚರಣೆ ನಡೆಸುವಂತಿಲ್ಲ. ಬೆಂಗಳೂರಿನ ಹೊರ ಭಾಗದಲ್ಲಿಯೂ ಹೊಸವರ್ಷಕ್ಕೆ ನಿರ್ಬಂಧವಿದೆ. ಖಾಸಗಿ ಜಾಗದಲ್ಲಿ ಆಚರಿಸಿಕೊಳ್ಳಬಹುದು. ಬಾರ್, ಪಬ್, ಕ್ಲಬ್ ಗಳ ಬಂದ್ ಆಗಲಿದೆ ಎಂದರು.

ಡ್ಯಾನ್ಸ್, ಮ್ಯೂಸಿಕ್ ಗೆ ಅವಕಾಶ ಇರುವುದಿಲ್ಲ. ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ದಿನ ನಿಷೇಧಾಜ್ಞೆ ಜಾರಿಯಾಗಲಿದ್ದು, ರಸ್ತೆಯಲ್ಲಿಹೊಸವರ್ಷಾಚರಣೆ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಮುಲಾಜಿಲ್ಲದೇ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.



SHARE THIS

Author:

0 التعليقات: