ಕಿಸ್ಮಸ್ ಸಂಭ್ರಮಾಚರಣೆ : ದೇಶದ ಕ್ರಿಶ್ಚಿಯನ್ ಬಾಂಧವರಿಗೆ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ
ನವದೆಹಲಿ : ಇಂದು ಯೇಸು ಕ್ರಿಸ್ರನ ಜನ್ಮ ದಿನದ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಕ್ರಿಶ್ಚಿಯನ್ ಬಾಂಧವರು ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ. ಕೋವಿಡ್-19 ನಿಯಮ ಶಿಷ್ಟಾಚಾರ ಪಾಲನೆಯಲ್ಲಿರುವುದರಿಂದ ಕ್ರಿಸ್ ಮಸ್ ಹಬ್ಬದ ಸಂಭ್ರಮ, ಸಡಗರ ಈ ಬಾರಿ ಕೊಂಚ ಕಡಿಮೆಯಾಗಿದೆ.
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಕ್ರೈಸ್ತ ಬಾಂಧವರಿಗೆ ಶುಭಾಶಯ ಕೋರಿದ್ದಾರೆ. ಯೇಸುಕ್ರಿಸ್ತನ ಜಯಂತಿ ಅಂಗವಾಗಿ ಕ್ರಿಸ್ಮಸ್ ಹಬ್ಬವನ್ನು ಶ್ರದ್ಧೆ ಹಾಗೂ ಸಂಭ್ರಮದ ಪ್ರತೀಕವಾಗಿ ಆಚರಣೆ ಮಾಡಲಾಗುವುದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ, ಕ್ರೈಸ್ತ ದೇವರ ಜೀವನ ಮತ್ತು ತತ್ವಗಳು ವಿಶ್ವದ ಕೋಟ್ಯಂತರ ಜನರಿಗೆ ಸ್ಪೂರ್ತಿ ತುಂಬಿದೆ. ಎಲ್ಲರೂ ಒಳಗೊಂಡ ಸಮಾಜ ನಿರ್ಮಾಣಕ್ಕೆ ಅವರು ತೋರಿಸಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಮುನ್ನಡೆಯೋಣ ಎಂದಿದ್ದಾರೆ.
0 التعليقات: