Thursday, 3 December 2020

ರೈತರ ಪ್ರತಿಭಟನೆ; ಪ್ರತಿಷ್ಠಿತ ಪದ್ಮ ಪ್ರಶಸ್ತಿ ಮರಳಿಸಿದ ಪಂಜಾಬ್ ಮಾಜಿ ಸಿಎಂ ಬಾದಲ್


 ರೈತರ ಪ್ರತಿಭಟನೆ; ಪ್ರತಿಷ್ಠಿತ ಪದ್ಮ ಪ್ರಶಸ್ತಿ ಮರಳಿಸಿದ ಪಂಜಾಬ್ ಮಾಜಿ ಸಿಎಂ ಬಾದಲ್

ಚಂಡೀಗಢ್/ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ದೆಹಲಿಯ ವಿವಿಧ ಗಡಿಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಏತನ್ಮಧ್ಯೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಪ್ರತಿಷ್ಠಿತ ಪದ್ಮ ವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡಿರುವುದಾಗಿ ವರದಿ ತಿಳಿಸಿದೆ.

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗಿದೆ ಎಂದು ಆರೋಪಿಸಿ ಪ್ರತಿಭಟನಾರ್ಥವಾಗಿ ಅಕಾಲಿ ದಳದ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಬಾದಲ್ ಕೇಂದ್ರದ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸಿರುವುದಾಗಿ ವರದಿ ವಿವರಿಸಿದೆ.

ಕೇಂದ್ರದ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಸುಮಾರು 35 ರೈತ ಸಂಘಟನೆಗಳ ಮುಖಂಡರ ಜತೆ ಕೇಂದ್ರ ಮಾತುಕತೆ ನಡೆಸುತ್ತಿದೆ. ಈಗಾಗಲೇ ನಡೆದ 2,3 ಸುತ್ತಿನ ಮಾತುಕತೆ ವಿಫಲಗೊಂಡಿದ್ದು, ರೈತರು ದೆಹಲಿಯ ವಿವಿಧ ಗಡಿಭಾಗದಲ್ಲಿ ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ.

ಆದಷ್ಟು ಶೀಘ್ರವಾಗಿ ಕೃಷಿ ಕಾಯ್ದೆ ಸಂಬಂಧದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರೀಂದರ್ ಸಿಂಗ್ ರೈತರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ದೀರ್ಘಕಾಲದ ಪ್ರತಿಭಟನೆಯಿಂದ ಪಂಜಾಬ್ ಆರ್ಥಿಕತೆಗೆ ಹಾಗೂ ದೇಶದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದಿರುವುದಾಗಿ ಎಚ್ಚರಿಸಿದ್ದಾರೆ.


SHARE THIS

Author:

0 التعليقات: