Sunday, 6 December 2020

ನಟಿ 'ಖುಷ್ಬೂ' ಬೆನ್ನಲ್ಲೇ 'ವಿಜಯಶಾಂತಿ' ಕಾಂಗ್ರೆಸ್ ಗೆ ಗುಡ್ ಬೈ : ನಾಳೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆ


 ನಟಿ 'ಖುಷ್ಬೂ' ಬೆನ್ನಲ್ಲೇ 'ವಿಜಯಶಾಂತಿ' ಕಾಂಗ್ರೆಸ್ ಗೆ ಗುಡ್ ಬೈ : ನಾಳೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆ


ನವದೆಹಲಿ : ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ನ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ವಿಜಯ ಶಾಂತಿ ಅವರು ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ .


ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿರುವ ವಿಜಯ ಶಾಂತಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಸಮ್ಮುಖದಲ್ಲಿ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.


ನಟಿ ವಿಜಯಶಾಂತಿ ಅವರು ಬಿಜೆಪಿ ಸೇರ್ಪಡೆಯಾದರೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಉನ್ನತ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದ್ದು, ಈ ಮೂಲಕ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇತ್ತೀಚೆಗೆ ನಟಿ ಖುಷ್ಬೂ ಕೂಡ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.SHARE THIS

Author:

0 التعليقات: