Saturday, 12 December 2020

ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್!


ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್!


ಬೆಂಗಳೂರು : ರಾಜ್ಯದಲ್ಲಿ ರೈತರ ಪ್ರತಿಭಟನೆಯ ನಂತ್ರ ಸಾರಿಗೆ ನೌಕರರ ಬಿಸಿ ಸರ್ಕಾರಕ್ಕೆ ಮುಟ್ಟಿತ್ತು. ಇದೇ ತಲೆ ಬಿಸಿಯಲ್ಲಿರುವ ರಾಜ್ಯ ಸರ್ಕಾರಕ್ಕೆ ಮತ್ತೊಂದು ಹೋರಾಟದ ಬಿಸಿ ಮುಟ್ಟಿಸಲು ಸಜ್ಜುಗೊಂಡಿದೆ. ಅದೇ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ಕ್ಯಾಮ್ಸ್) ವು ವಿವಿಧ ಬೇಡಿಕೆಗೆ ಆಗ್ರಹಿಸಿ ಡಿಸೆಂಬರ್ 16ರಿಂದ ರಾಜ್ಯದಲ್ಲಿ ಪ್ರತಿಭಟನೆಗೆ ಇಳಿಯಲಿದೆ.


ಈ ಕುರಿತು ಮಾಹಿತಿ ನೀಡಿರುವಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಕ್ಯಾಮ್ಸ್)ದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಡಿಸೆಂಬರ್ 16 ರಂದು ರಾಜ್ಯದಲ್ಲಿ ಖಾಸಗಿ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತದೆ. ನಮ್ಮ ನಡೆ ಶಿಕ್ಷಕರ ಕಡೆ, ಶಿಕ್ಷಣ ಸಂಸ್ಥೆ, ಶಿಕ್ಷಕರು ಉಳಿದರೆ ಶಿಕ್ಷಣ ಉದ್ದೇಶದೊಂದಿಗೆ ನಡೆಯಲಿದೆ. ಇದೊಂದು ಸಾಂಕೇತಿಕ ಹೋರಾಟ. ಆದರೆ ಕರೋನಾ ಕಷ್ಟ ಕಾಲದಲ್ಲಿ ಖಾಸಗಿ ಶಿಕ್ಷಕರನ್ನು ನಿರ್ಲಕ್ಷ್ಯಿಸಿದೆ. ಹೀಗಾಗಿ ನಾನಾ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ಆಯಾ ಜಿಲ್ಲೆಗಳಲ್ಲಿ ಹೋರಾಟ ನಡೆಯಲಿದೆ. ಮೂರು ಸಾವಿರಕ್ಕೂ ಹೆಚ್ಚು ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.


ಇನ್ನೂ ಮುಂದುವರೆದು ರಾಜ್ಯದಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕೋವಿಡ್ ಲಸಿಕೆ ಮೊದಲ ಹಂತದಲ್ಲಿಯೇ ಕೊಡಬೇಕು. ಖಾಸಗಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಆಹಾರ ಕಿಟ್ ವಿತರಿಸುವುದು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಗೌರವ ಧನ ನೀಡಬೇಕು. ಖಾಸಗಿ ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಸರ್ಕಾರ ಪ್ರತ್ಯೇಕ ವಿಮಾ ಸೌಲಭ್ಯ ನೀಡಬೇಕು. ಶಾಲೆಗಳ ಪುನರಾರಂಭ, ದಾಖಲಾತಿ, ಹಾಜರಾತಿ ಕನಿಷ್ಠ ಮೌಲ್ಯಮಾಪನ ತೇರ್ಗಡೆ, ಬಾಕಿ ಶುಲ್ಕ ವಸೂಲಿ ಹಾಗೂ ಕನಿಷ್ಠ ಶುಲ್ಕ ವಸೂಲಿ ಮಾಡುವ ಬಗ್ಗೆ ಶಿಕ್ಷಣ ಇಲಾಖೆಯ ಸ್ಪಷ್ಟ ಆದೇಶಕ್ಕಾಗಿ ಆಗ್ರಹಿಸಿ ಈ ಹೋರಾಟ ನಡೆಸಲಾಗುತ್ತಿದೆ. ಈ ವಿಚಾರದ ಬಗ್ಗೆ ಶಿಕ್ಷಣ ಸಚಿವರ ಜತೆ ಅನೇಕ ಸಲ ಚರ್ಚಿಸಿದ್ದು, ಈವರೆಗೂ ಯಾವದೇ ತೀರ್ಮಾನ ಕೈಗೊಳ್ಳದ ಹಿನ್ನೆಲೆಯಲ್ಲಿ ಸಾಂಕೇತಿಕ ಹೋರಾಟ ನಡೆಸುತ್ತೇವೆ. ಈಡೇರಿಸದ ಪಕ್ಷದಲ್ಲಿ ಖಾಸಗಿ ಶಿಕ್ಷಕರು ಕೂಡ ಸಾರಿಗೆ ನೌಕರರ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
SHARE THIS

Author:

0 التعليقات: