Monday, 14 December 2020

ಸಾರಿಗೆ ನೌಕರರ ಮುಷ್ಕರ ಅಂತ್ಯ : ರಾಜ್ಯಾದ್ಯಂತ ಬಸ್ ಸಂಚಾರ ಆರಂಭ


ಸಾರಿಗೆ ನೌಕರರ ಮುಷ್ಕರ ಅಂತ್ಯ : ರಾಜ್ಯಾದ್ಯಂತ ಬಸ್ ಸಂಚಾರ ಆರಂಭ

ಬೆಂಗಳೂರು : ರಾಜ್ಯ ಸರ್ಕಾರ ಮುಷ್ಕರ ನಿರತ ಸಾರಿಗೆ ನೌಕರರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸುವ ಕುರಿತಂತೆ ಲಿಖಿತ ಪತ್ರದಲ್ಲಿ ತಿಳಿಸಿದ ಕಾರಣ, ಮುಂದಿನ 3 ತಿಂಗಳಲ್ಲಿ ಬೇಡಿಕೆ ಈಡೇರಿಸುವಂತ ಪಟ್ಟಿನೊಂದಿಗೆ, ಸಾರಿಗೆ ನೌಕರರ ಮುಷ್ಕರ ಸಮಾಪ್ತಿ ಕಂಡಿದೆ. ಮುಷ್ಕರ ನಿರತ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾದ ಕಾರಣ, ರಾಜ್ಯಾಧ್ಯಂತ ಸಾರಿಗೆ ಬಸ್ ಸಂಚಾರ ಆರಂಭಗೊಂಡಿವೆ. ಈ ಮೂಲಕ ಯಥಾಸ್ಥಿತಿಯತ್ತ ಸಾರಿಗೆ ಬಸ್ ಸೇವೆ ತಲುಪುತ್ತಿದೆ.

ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರು. ಇಂತಹ ನೌಕರರ 10 ಬೇಡಿಕೆಗಳಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವಂತ ಬೇಡಿಕೆ ಹೊರತಾಗಿ, 9 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಅಲ್ಲದೇ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು ಲಿಖಿತವಾಗಿ ಪತ್ರದಲ್ಲಿ ಬೇಡಿಕೆ ಈಡೇರಿಸುವುದಾಗಿ ತಿಳಿಸಿದ್ದರಿಂದಾಗಿ, ಸಾರಿಗೆ ನೌಕರರ ಮುಷ್ಕರವನ್ನು ವಾಪಾಸ್ ಪಡೆಯಲಾಗಿದೆ.

ಆದ್ರೇ ಸಾರಿಗೆ ನೌಕರರು ತಾತ್ಕಾಲಿಕವಾಗಿ ಮುಷ್ಕರ ವಾಪಾಸ್ ಪಡೆದರೂ, ಸರ್ಕಾರಕ್ಕೆ ಬೇಡಿಕೆ ಈಡೇರಿಸೋದಕ್ಕೆ ಗಡುವು ನೀಡಿದೆ. ಒಂದು ವೇಳೆ ಮೂರು ತಿಂಗಳಲ್ಲಿ ಬೇಡಿಕೆ ಈಡೇರಿಸದೇ ಇದ್ದರೇ ಮತ್ತೆ ಮುಷ್ಕರ ನಡೆಸುವುದಾಗಿ ನೌಕರರ ನೇತೃತ್ವ ವಹಿಸಿದ್ದಂತ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಇದರಿಂದಾಗಿ ಸಾರಿಗೆ ನೌಕರರು ಮುಷ್ಕರ ಅಂತ್ಯಗೊಳಿಸಿ, ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ ಆರಂಭಗೊಂಡಿದೆ.



SHARE THIS

Author:

0 التعليقات: