ಕಿಲ್ಲರ್ COVID ಸೋಂಕಿಗೆ ರಾಜ್ಯದಲ್ಲಿಂದು 12 ಮಂದಿ ಬಲಿ : 11,846 ಕ್ಕೆ ಏರಿದ ಕೊರೊನಾ ಸಾವಿನ ಸಂಖ್ಯೆ
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 12 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11846 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು 6 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4176 ಕ್ಕೆ ಏರಿಕೆಯಾಗಿದೆ, ಕರ್ನಾಟಕದಲ್ಲಿ ಇಂದು 1325 ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 891685 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 709 ಪ್ರಕರಣ ಪತ್ತೆಯಾಗಿದೆ,
ಕರ್ನಾಟಕದಲ್ಲಿ ಇಂದು 1400 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 891685 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 24959 ಸಕ್ರಿಯ ಪ್ರಕರಣಗಳಿದೆ. ಐಸಿಯುನಲ್ಲಿ 278 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
0 التعليقات: