ಧರ್ಮೇಗೌಡರ ಆತ್ಮಹತ್ಯೆ ಇಂದಿನ ಕಲುಷಿತ, ತತ್ವರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ: HDK
ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್ನ ಜಾತ್ಯತೀತತೆ ಪರೀಕ್ಷೆ ಮಾಡಲಾಯಿತು. ಆದರೆ, ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದರೂ ಅವರ ಆತ್ಮಾವಲೋಕನ ಆಗಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
'ನಿರೀಕ್ಷೆ ಮಾಡಿರಲಿಲ್ಲ..' ಧರ್ಮೇಗೌಡ ನಿಧನದ ಬಗ್ಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಹೇಳಿಕೆ
ಎಸ್.ಎಲ್. ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
0 التعليقات: