KPSCಯ 'ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ' ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ಕರೆಯಲ್ಪಟ್ಟಿದ್ದಂತ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಯ, ಮುಖ್ಯ ಪರೀಕ್ಷೆಗೆ ದಿನಾಂಕವನ್ನು ಆಯೋಗ ಪ್ರಕಡಿಸಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವ ಕೆಪಿಎಸ್ಸಿಯು, ದಿನಾಂಕ 27-1-2021ರಿಂದ 30-1-2021ರವರೆಗೆ ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ ಮುಖ್ಯ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.
ಇಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮುಖ್ಯಪರೀಕ್ಷೆಗೆ ಆಯ್ಕೆಯಾದಂತ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿಯಲ್ಲಿಸಲು ದಿನಾಂಕ 09-12-2020ರಿಂದ ಆರಂಭಗೊಳ್ಳಲಿದೆ. ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-12-2020 ಆಗಿದೆ. ಶುಲ್ಕ ಪಾವತಿಗೆ ಕೊನೆಯ ದಿನಾಂಕ 24-12-2020 ಆಗಿರುತ್ತದೆ. ಅರ್ಜಿಯ ಪ್ರಿವ್ಯೂವನ್ನು ಡೌನ್ ಲೋಡ್ ಮಾಡಿಕೊಂಡು, ಸ್ವಯಂ ದೃಢೀಕರಿಸಿದ ಎಲ್ಲಾ ಪ್ರಮಾಣ ಪತ್ರಗಳ ಪ್ರತಿಗಳನ್ನು ದ್ವಿಪ್ರತಿಯಲ್ಲಿ ಅರ್ಜಿಯೊಂದಿಗೆ ಆಯೋಗಕ್ಕೆ ಸಲ್ಲಿಸಲು ಕೊನೆಯ ದಿನಾಂಕ 29-12-2020 ಆಗಿರುತ್ತದೆ ಎಂಬುದಾಗಿ ತಿಳಿಸಿದೆ.
0 التعليقات: