Saturday, 5 December 2020

ಚಿತ್ರದುರ್ಗದಲ್ಲಿ ಭೀಕರ ಅಪಘಾತ : `KSRTC' ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು


 ಚಿತ್ರದುರ್ಗದಲ್ಲಿ ಭೀಕರ ಅಪಘಾತ : `KSRTC' ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು


ಚಿತ್ರದುರ್ಗ : ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ 50 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನ ಕಡೆಗೆ ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ , ಹಿರಿಯೂರಿನ ಶಿವಮೂರ್ತಿ ಬಡಾವಣೆಯ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿ ಯಾದಗಿರಿ ಮೂಲದ ಐಶ್ವರ್ಯ (12) ಹಾಗೂ ಮತ್ತೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, 10 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.ಗಾಯಗೊಂಡರವನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹಿರಿಯೂರು ನಗರ ದಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHARE THIS

Author:

0 التعليقات: