Thursday, 10 December 2020

KSRTC ಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ


KSRTC ಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 10-12-2020ರವರೆಗೆ ಕಲ್ಪಿಸಲಾಗಿತ್ತು. ಇದೀಗ ನಿಗಮದ ಬಸ್ಸುಗಳಲ್ಲಿ ವಿದ್ಯಾರ್ಥಿ ಬಸ್ ಪಾಸುದಾರರಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 31-12-2020ರವರೆಗೆ ಅವಕಾಶ ನೀಡಿ, ಕೆಎಸ್ ಆರ್ ಟಿ ಸಿ ಆದೇಶಿಸಿದೆ.

ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿಯೊಂದಿಗೆ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂಬುದಾಗಿ ತಿಳಿಸಿದೆ.

ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯ, ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು, ಅನುದಾನ, ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಚಟುವಟಿಕೆಗಳನ್ನು ದಿನಾಂಕ 17-11-2020ರಿಂದ ಪ್ರಾರಂಭಿಸಲು ಸರ್ಕಾರದ ಆದೇಶದಲ್ಲಿ ಸೂಚಿಸಿದ್ದರಿಂದ, ನಿಗಮದ ಬಸ್ಸುಗಳಲ್ಲಿ ವಿದ್ಯಾರ್ಥಿ ಬಸ್ ಪಾಸುದಾರರಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 10-12-2020ರ ಇಂದಿನ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಮುಂದುವರೆದು, ಕೆ ಎಸ್ ಆರ್ ಟಿ ಸಿ ನಿಗಮವು 2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ದಿನಾಂಕ 31-12-2020ರವರೆಗೆ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಕ್ರಮಕೈಗೊಳ್ಳಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
SHARE THIS

Author:

0 التعليقات: