ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : KSRTC ಬಸ್-ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು
ಚಿತ್ರದುರ್ಗ : ಕೆಎಸ್ ಆರ್ ಟಿಸಿ ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ.
ತಿಮ್ಮಣ್ಣ (40), ರತ್ನಮ್ಮ (38), ಮಹೇಶ್ (19), ದುರ್ಗಪ್ಪ (16) ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಲೂಸರ್ ಮತ್ತು ಬೆಂಗಳೂರಿನಿಂದ ಲಿಂಗಸೂಗುರಿನತ್ತ ತೆರಳುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದರೆ, 7 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
0 التعليقات: