ಗಮನಿಸಿ : ಇಂದು ಖಾಸಗಿ ಆಸ್ಪತ್ರೆಗಳಲ್ಲಿ `OPD' ಬಂದ್
ಬೆಂಗಳೂರು : ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಇಂದು ಭಾರತೀಯ ವೈದ್ಯಕೀಯ ಸಮಘದ ನೇತೃತ್ವದಲ್ಲಿ ಖಾಸಗಿ ವೈದ್ಯರು ಇಂದು ಒಪಿಡಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ 39 ಸಾಮಾನ್ಯ ಹಾಗೂ ಕಿವಿ, ಮೂಗು, ಗಂಟಲು, ಕಣ್ಣು, ಶಿರ ಮತ್ತು ದಂತ ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಅನುಮತಿ ನೀಡಿ ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸನ್ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಅಲೋಪಥಿ ವೈದ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಇಂದಿನ ಪ್ರತಿಭಟನೆಗೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ ಸೇರಿ ವೈದ್ಯರ ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಿ, ಒಳರೋಗಿ ವಿಭಾಗಗಳಲ್ಲಿ ಕಪ್ಪು ಪಟ್ಟಿ ಧರಿಸಿ, ಸೇವೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ.
0 التعليقات: