Saturday, 9 January 2021

ಜ.11 ರಿಂದ ಜ.13 ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ಜನಸೇವಕ್ ಸಮಾವೇಶ


ಜ.11 ರಿಂದ ಜ.13 ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ಜನಸೇವಕ್ ಸಮಾವೇಶ

ಕಲಬುರಗಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ ಜನವರಿ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.

ಒಟ್ಟು ಐದು ತಂಡಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಜ.11ರಿಂದ 13ರವರೆಗೆ ಸಮಾವೇಶ ನಡೆಯಲಿದ್ದು, ಗ್ರಾಪಂ ಸದಸ್ಯರು ಮುಂದಿನ ದಿನಗಳಲ್ಲಿ ಯಾವ ರೀತಿ ಜನ ಸೇವೆ ಮಾಡಬೇಕೆಂಬುದರ ಬಗ್ಗೆ ಜಾಗೃತಿ ಮೂಡಿಸುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಜ.11ರಂದು ಮೈಸೂರಿನಲ್ಲಿ ಮೊದಲ ಸಮಾವೇಶ ಆರಂಭವಾಗಲಿದೆ. ಈ ಸಮಾವೇಶವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಆ ಭಾಗದ ಸಂಸದರು, ಶಾಸಕರು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರು, ಗ್ರಾಪಂ ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದ ಎಲ್ಲ ಕಡೆಯೂ ಈ ಜನಸೇವಕ್ ಸಮಾವೇಶಗಳನ್ನು ಆಯೋಜಿಸಲಾಗುವುದು. ಇದಕ್ಕಾಗಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಹಾಗೂ ಶ್ರೀರಾಮುಲು ನೇತೃತ್ವದಲ್ಲಿ 5 ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.SHARE THIS

Author:

0 التعليقات: