Tuesday, 5 January 2021

ಭಾರತದಲ್ಲಿ ಮತ್ತೆ 13 ಮಂದಿಗೆ `ರೂಪಾಂತರಿ' ಕೊರೊನಾ ದೃಢ : ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆ


 ಭಾರತದಲ್ಲಿ ಮತ್ತೆ 13 ಮಂದಿಗೆ 'ರೂಪಾಂತರಿ' ಕೊರೊನಾ ದೃಢ : ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ದೇಶದಲ್ಲಿ 13 ಜನರಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಂದೇ ದಿನ 13 ಮಂದಿಗೆ ಹೊಸದಾಗಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಬ್ರಿಟನ್ ನಿಂದ ಭಾರತಕ್ಕೆ ಬಂದಿರುವ ಪ್ರಯಾಣಿಕರಲ್ಲಿ ಹೆಚ್ಚಾಗಿ ರೂಪಾಂತರಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.


SHARE THIS

Author:

0 التعليقات: