ಮಲೆನಾಡಿನಲ್ಲಿ ಕಾಮಾಂಧರ ಅಟ್ಟಹಾಸ : ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ; 17 ಮಂದಿ ವಿರುದ್ಧ 'FIR' ದಾಖಲು
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಕಾಮಾಂಧರು ಅಟ್ಟಹಾಸ ಮೆರೆದಿದ್ದು, ಎಸ್ ಎಸ್ ಎಲ್ ಸಿ ಓದುತ್ತಿದ್ದ ಬಾಲಕಿ ಮೇಲೆ ಕಾಮುಕರು ಅತ್ಯಾಚಾರ ಎಸಗಿದ ಘಟನೆ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಶೃಂಗೇರಿ ಪೊಲೀಸರು 17 ಮಂದಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಇನ್ನೂ, ಅತ್ಯಾಚಾರಕ್ಕೆ ಸಹಕರಿಸಿದ ಬಾಲಕಿಯ ಚಿಕ್ಕಮ್ಮ ಗೀತಾ ಮೇಲೂ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ. ಇದುವರೆಗೂ ಪೊಲೀಸರು 17 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಪ್ರಾಪ್ತೆ ಮೇಲೆ ಕಳೆದ ಸೆಪ್ಟೆಂಬರ್ನಿಂದ 30ಕ್ಕೂ ಹೆಚ್ಚು ಮಂದಿ ಅತ್ಯಾಚಾರವೆಸಗಿದ್ದರು.
ಘಟನೆ ಹಿನ್ನೆಲೆ
ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬಾಲಕಿ ತನ್ನ ತಾಯಿ ಮೃತಪಟ್ಟ ಬಳಿಕ ನಂತರ ಚಿಕ್ಕಮ್ಮನ ಜೊತೆ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಆಶ್ರಯ ಪಡೆದಿದ್ದಳು. ಇದನ್ನೇ ದುರುಪಯೋಗ ಮಾಡಿಕೊಂಡ ಕಾಮುಕನೋರ್ವ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ನಂತರ ಮೊಬೈಲ್ನಲ್ಲಿ ವಿಡಿಯೊ ಮಾಡಿಕೊಂಡಿದ್ದ ಎನ್ನಲಾಗಿದೆ. ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ತನ್ನ ಸ್ನೇಹಿತರನ್ನು ಕಳಿಸಿ ಬಾಲಕಿ ಮೇಲೆ ಅತ್ಯಾಚಾರವೆಸಗಲು ಸಹಕರಿಸಿದ್ದ ಎಂದು ಹೇಳಲಾಗಿದೆ.
ಪ್ರಕರಣ ಬೆಳಕಿಗೆ ಬಂದ ಮೇಲೆ ಬಾಲಕಿಯನ್ನು ರಕ್ಷಿಸಿದ್ದ ಮಕ್ಕಳ ಕಲ್ಯಾಣ ಸಮಿತಿ ಎರಡು ದಿನಗಳ ಕಾಲ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿರಿಸಿತ್ತು. ನಂತರ ನಗರದಲ್ಲಿನ ಸ್ವಾಧಾರ ಕೇಂದ್ರಕ್ಕೆ ಕಳಿಸಲಾಗಿತ್ತು. ಆರೋಪಿಗಳ ವಿರುದ್ಧ ದೂರು ದಾಖಲಿಸಲು ಮಕ್ಕಳ ಕಲ್ಯಾಣ ಸಮಿತಿ ಶೃಂಗೇರಿ ಪೊಲೀಸರಿಗೆ ಶನಿವಾರ ಸೂಚಿಸಿತ್ತು. ಅಂತೆಯೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು 17 ಮಂದಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಇನ್ನೂ, ಅತ್ಯಾಚಾರಕ್ಕೆ ಸಹಕರಿಸಿದ ಬಾಲಕಿಯ ಚಿಕ್ಕಮ್ಮ ಗೀತಾ ಮೇಲೂ ಪ್ರಕರಣ ದಾಖಲಿಸಲಾಗಿದೆ.
0 التعليقات: