ಶೀಘ್ರವೇ ಹೆಣ್ಣು ಮಕ್ಕಳ ಮದುವೆ ವಯಸ್ಸು 21 ಕ್ಕೆ ಏರಿಕೆ?
ನವದೆಹಲಿ : ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ವಿವಾಹ ವಯಸ್ಸಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಈ ಸಂಬಂಧ ಕೇಂದ್ರ ಸರ್ಕಾರ ರಚಿಸಿದ್ದ ಸಮಿತಿಯು ತನ್ನ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಪ್ರಧಾನಿ ಕಾರ್ಯಾಲಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಶೀಘ್ರವೇ ಹೆಣ್ಣು ಮಕ್ಕಳ ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಏರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ವರ್ಷಾರಂಭದಲ್ಲಿ ಕೇಂದ್ರ ಸರ್ಕಾರ ಜಯಾ ಜೇಟ್ಲಿ ನೇತೃತ್ವದಲ್ಲಿ 10 ಮಂದಿ ಸದಸ್ಯರ ಕಾರ್ಯಾಪಡೆಯೊಂದನ್ನು ರಚಿಸಿತ್ತು. ಅದಕ್ಕೆ ಹೆಣ್ಣುಮಕ್ಕಳ ವಿವಾಹ ವಯೋಮಿತಿ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚಿಸಲಾಗಿತ್ತು.
ಹೆಣ್ಣು ಮಕ್ಕಳ ತಾಯ್ತನಕ್ಕೆ ಅಗತ್ಯವಿರುವ ಆರೋಗ್ಯ, ಪೌಷ್ಠಿಕಾಂಶ, ಶಿಶು ಮರಣ ದರ, ಗರ್ಭಿಣಿಯರ ಮರಣದರ, ಲಿಂಗಾನುಪಾತ ಮುಂತಾದ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಸಮಿತಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
Yes
ReplyDelete