ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ಆದೇಶ ಜಾರಿ
ಬೆಂಗಳೂರು: ಪ್ರತಿವರ್ಷ ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನ ಆಚರಿಸಲು ತೀರ್ಮಾನಿಸಲಾಗಿದೆ..ಈ ಕುರಿತು ಸರ್ಕಾರಿ ಆದೇಶ ಜಾರಿಯಾಗಿದೆ.ಸರ್ಕಾರದಿಂದ ಪ್ರತೀ ವರ್ಷ ' ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ' ಆಚರಿಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೂ ಒಂದು ದಿನ ಇರಲಿ ಎಂಬ ಬೇಡಿಕೆಗೆ ಸರ್ಕಾರ ಸಮ್ಮತಿಸಿದ್ದು, ಈ ವರ್ಷದಿಂದಲೇ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.
ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ ನಾಗರಿಕ ಸೇವೆಗಳ ಬಗ್ಗೆ ಮಾಹಿತಿ ನೀಡಿಕೆ, ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ನೌಕರರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
0 التعليقات: