Tuesday, 26 January 2021

ರೈತರ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ ಪ್ರಕರಣ: ದೆಹಲಿ ಪೊಲೀಸರಿಂದ ಇದುವರೆಗೆ ಬರೋಬ್ಬರಿ 22 FIR ದಾಖಲು..!


 ರೈತರ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ ಪ್ರಕರಣ: ದೆಹಲಿ ಪೊಲೀಸರಿಂದ ಇದುವರೆಗೆ  ಬರೋಬ್ಬರಿ 22 FIR ದಾಖಲು..!

ನವದೆಹಲಿ: ಮಂಗಳವಾರ ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಪೊಲೀಸರು ಮತ್ತು ರೈತರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೆ ಕನಿಷ್ಠ 22 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಆದ್ರೆ, ಇದುವರೆಗೂ ಯಾರನ್ನೂ ಬಂಧಿಸಿಲ್ಲ, ಶಂಕಿತರನ್ನ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಗಲಭೆ, ಸಾರ್ವಜನಿಕ ಆಸ್ತಿ ಹಾನಿ ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ʼಗಳ ಅಡಿಯಲ್ಲಿ ಪ್ರಕರಣಗಳನ್ನ ದಾಖಲಿಸಿಕೊಂಡಿರೋದಾಗಿ ದೆಹಲಿ ಪೊಲೀಸ್ ವಕ್ತಾರ ಅನಿಲ್ ಮಿತ್ತಲ್ ತಿಳಿಸಿದ್ದಾರೆ.

ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿ ವರದಿಗಳನ್ನ ದಾಖಲಿಸುವ ಸಾಧ್ಯತೆಯಿದೆ. ಹಿಂಸಾಚಾರದಲ್ಲಿ ಭಾಗಿಯಾದವರನ್ನ ಗುರುತಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


SHARE THIS

Author:

0 التعليقات: