ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ನೋಯ್ಡಾ : ಜನವರಿ 26ರ ಗಣರಾಜ್ಯೋತ್ಸವ ಸಂದರ್ಭದಂದು ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಪೆರೇಡ್ ಗೆ ಸಂಬಂಧಿಸಿದಂತೆ, ಇದೀಗ ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ ಆರು ಹಿರಿಯ ಪತ್ರಕರ್ತರ ವಿರುದ್ಧ ನೊಯ್ಡಾ ಪೊಲೀಸ್ ಠಾಣೆಯಲ್ಲಿ ದೇಶ ದ್ರೋಹ ಪ್ರಕರಣ ದಾಖಲಾಗಿದೆ.
ಜ.26ರಂದು ಗಣರಾಜ್ಯೋತ್ಸವ ಸಂದರ್ಭದಲ್ಲಿ ರೈತರ ಟ್ರ್ಯಾಕ್ಟರ್ ಪೆರೇಡ್ ದೆ ಸಂಸದ ಶಶಿ ತರೂರ್ ಸೇರಿದಂತೆ ಏಳು ಮಂದಿ ಹಿರಿಯ ಪತ್ರಕರ್ತರಾದಂತ ಮೃಣಾಲ್ ಪಾಂಡೆ, ರಾಜದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಅಘ, ಪರೇಶ್ ನಾಥ್ ಹಾಗೂ ಆನಂತ್ ನಾಥ್ ಸಾಮಾಜಿಕ ಮಾಧ್ಯಮಗಳಲ್ಲಿ, ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದಂತ ಪೋಸ್ಟ್ ಗಳು ಕಾರಣವೆಂದು ಸ್ಥಳೀಯರೊಬ್ಬರು ನೊಯ್ಡಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿದಂತೆ 7 ಮಂದಿ ಪತ್ರಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ಗಳಾದ 124 ಎ (ದೇಶದ್ರೋಹ), 295 ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ), 34 ( ಆಯಕ್ಟ್ ಡನ್ ಬೈ ಸೆವೆರಲ್ ಫರ್ದರೆನ್ಸ್ ಆಫ್ ಕಾಮನ್ ಇನ್ ಟೆನ್ಶನ್ ), 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
0 التعليقات: