Tuesday, 19 January 2021

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 75 ಲಕ್ಷ ರೂ. ನಗದು ಹಣದೊಂದಿಗೆ ಸಿಕ್ಕಿಬಿದ್ದ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿ!


ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 75 ಲಕ್ಷ ರೂ. ನಗದು ಹಣದೊಂದಿಗೆ ಸಿಕ್ಕಿಬಿದ್ದ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿ!

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೆನ್ನೈ ಕಸ್ಟಮ್ಸ್ ಅಧಿಕಾರಿ ದಂಪತಿ ಬಳಿಯಿಂದ ಬರೋಬ್ಬರಿ 75 ಲಕ್ಷ ರೂಪಾಯಿ ನಗದು, ಚಿನ್ನಾಭರಣವನ್ನು ಸಿಐಎಸ್‌ಎಫ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಚೆನ್ನೈನ ಕಸ್ಟಮ್ಸ್ ಅಧಿಕಾರಿ ಮೊಹಮ್ಮದ್ ಇರ್ಫಾನ್ ಅಹ್ಮದ್ ಹಾಗೂ ಅವರ ಪತ್ನಿ ಬಳಿ ತಪಾಸಣೆ ನಡೆಸಿದ್ದು ಈ ವೇಳೆ ನಗದು ಪತ್ತೆಯಾಗಿದೆ.

ಸಿಐಎಸ್‌ಎಫ್ ಅಧಿಕಾರಿಗಳು ದಂಪತಿಯಿಂದ ಎರಡು ದುಬಾರಿ ಮೌಲ್ಯದ ಮೊಬೈಲ್, ಆಯಪಲ್ ವಾಚ್, ಚಿನ್ನಾಭರಣ, 74 ಲಕ್ಷದ 81 ಸಾವಿರ ನಗದನ್ನು ಜಪ್ತಿ ಮಾಡಿದ್ದು ಪ್ರಕರಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಚೆನ್ನೈನಲ್ಲಿರುವ ಇರ್ಫಾನ್ ಅಹ್ಮದ್ ಬೆಂಗಳೂರು ಮೂಲಕ ಉತ್ತರಪ್ರದೇಶದ ಲಖನೌಗೆ ಪ್ರಯಾಣಿಸುತ್ತಿದ್ದರು.



SHARE THIS

Author:

0 التعليقات: