Wednesday, 6 January 2021

ರಾಜ್ಯದಲ್ಲಿ ಕೊರೊನಾ ಪ್ರಕರಣ ಮತ್ತಷ್ಟು ಇಳಿಕೆ : ಇಂದು 784 ಮಂದಿಗೆ ಸೋಂಕು ಧೃಡ, ಆರು ಬಲಿ


ರಾಜ್ಯದಲ್ಲಿ ಕೊರೊನಾ ಪ್ರಕರಣ ಮತ್ತಷ್ಟು ಇಳಿಕೆ : ಇಂದು 784 ಮಂದಿಗೆ ಸೋಂಕು ಧೃಡ, ಆರು ಬಲಿ

ಬೆಂಗಳೂರು: ರಾಜ್ಯದಲ್ಲಿಂದು ಇಂದು ಹೊಸದಾಗಿ 784 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,24,137 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 1238 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,02,817 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕಿಲ್ಲರ್ ಕೊರೊನಾ ಸೋಂಕಿಗೆ ಇಂದು ಆರು ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,124 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸದ್ಯ 9177 ಸಕ್ರಿಯ ಪ್ರಕರಣಗಳಿವೆ

ಬೆಂಗಳೂರಿನಲ್ಲಿ ಇಂದು 437 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,90,785 ಕ್ಕೆ ಏರಿಕೆಯಾಗಿದೆ. ಇಂದು 902 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 3,80,769 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಮೂವರು ಸೋಂಕಿತರು ಕಿಲ್ಲರ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಇದುವರೆಗೆ 4336 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.



SHARE THIS

Author:

0 التعليقات: