ಬಿ.ಎಸ್.ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಖಚಿತ : ಸಿದ್ದರಾಮಯ್ಯ
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಛರಿಸಿದರು.
ರವಿವಾರ ರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಮ ಅಧಿಕಾರದಿಂದ ಕೆಳಗಿಳಿಸುವುದು ಖಚಿತ, ಯಾವ ಸಮಯ ಎನ್ನುವುದು ಅವರೇ ಹೇಳಬೇಕೆಂದು ಪರೋಕ್ಷವಾಗಿ ಟಾಂಗ್ ಕೊಟ್ಟರು.
ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಹೋರಾಟ, ಸಂಘರ್ಷದ ಹಿನ್ನೆಲೆಯಲ್ಲಿ ಬಂದಿದೆ. ಬಿಜೆಪಿಗೆ ಈ ಇಂಥ ಹಿನ್ನೆಲೆ ಇದೆಯೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಮಾಸ್ ಆಧಾರಿತ ಪಕ್ಷವಾಗಿತ್ತು. ಇದೀಗ ಕಾರ್ಯಕರ್ತರ ಆಧಾರಿತ ಪಕ್ಷವಾಗುವತ್ತ ಸಾಗುತ್ತಿದೆ ಎಂದರು.
0 التعليقات: