Wednesday, 6 January 2021

ಪಡಿತರ ಚೀಟಿದಾರರಿಗೆ ಶುಭಸುದ್ದಿ : ಶೀಘ್ರವೇ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ವಿತರಣೆ

ಪಡಿತರ ಚೀಟಿದಾರರಿಗೆ ಶುಭಸುದ್ದಿ : ಶೀಘ್ರವೇ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಂಡಿದ್ದ, ರಾಜ್ಯಮಟ್ಟದ ಸಮ್ಮೇಳನ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ, ರಾಜ್ಯ ಬಜೆಟ್ ಮಂಡನೆ ನಂತರ ಪಡಿತರದ ಜೊತೆಗೆ ರಾಜ್ಯದ ನ್ಯಾಯಾ ಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪು, ಅಡುಗೆ ಎಣ್ಣೆ, ಉಪ್ಪು ಸಿಗಲಿದೆ ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ಹಂತ ಹಂತವಾಗಿ ರಾಜ್ಯಾದ್ಯಂತ ಈ ಯೋಜನೆಯನ್ನು ವಿತರಿಸಲಾಗುವುದು. ಸದ್ಯದಲ್ಲೇ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಮುಂದಿನ ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗುವುದು ಅಂತ ಅವರು ಹೇಳಿದರು


SHARE THIS

Author:

0 التعليقات: