Saturday, 23 January 2021

ಆಕಾಶವಾಣಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ


 ಆಕಾಶವಾಣಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ

ನವದೆಹಲಿ: ದೆಹಲಿಯ ಆಕಾಶವಾಣಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿರುವ ಕಚೇರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ 8 ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.

ಆಕಾಶವಾಣಿ ಕೇಂದ್ರ ಕಚೇರಿಯ 101ನೇ ಕೊಠಡಿಯಲ್ಲಿ ಈ ಘಟನೆ ಸಂಭವಿಸಿದ್ದು, ವಿದ್ಯುತ್ ಉಪಕರಣಗಳಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗಿದೆ.


SHARE THIS

Author:

0 التعليقات: