Sunday, 3 January 2021

ಸಿಲಿಕಾನ್ ಸಿಟಿ ಜನರಿಗೆ ಗುಡ್ ನ್ಯೂಸ್ : ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ ಶುರು


ಸಿಲಿಕಾನ್ ಸಿಟಿ ಜನರಿಗೆ ಗುಡ್ ನ್ಯೂಸ್ : ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ ಶುರು

ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಮೆಜೆಸ್ಟಿಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಲು ಇನ್ಮುಂದೆ ಕೇವಲ 10-15 ರೂ. ನೀಡಿ ಪ್ರಯಾಣಿಸಬಹುದು.


ಇಂದಿನಿಂದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿರುವ ಜೊತೆಗೆ ನಗರದಿಂದ ನಿಲ್ದಾಣಕ್ಕೆ ಓಡಾಡುವ ರೈಲು ಸಂಖ್ಯೆಯನ್ನು ಹೆಚ್ಚಿಸಲಾಗಿದೆ.ಪ್ರಯಾಣ ದರ ಕೇವಲ 10-15 ರೂ.ಇದೆ.


ಕ್ರಾಂತಿವೀರ ಸಂಗೂಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಮುಂಜಾನೆ 4.45 ಕ್ಕೆ ಸಂಚಾರ ಆರಂಭಿಸಲಿದೆ. ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ.SHARE THIS

Author:

0 التعليقات: