ಧಾರವಾಡದ ಭೀಕರ ಅಪಘಾತಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ
ಧಾರವಾಡ, ಜನವರಿ 15: ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ಬೆಳಿಗ್ಗೆ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಈ ದುರ್ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧಾರವಾಡ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪಿಎಂಒ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸಂದೇಶ ಕಳುಹಿಸಿದ್ದಾರೆ.
ಪ್ರಧಾನಮಮಂತ್ರಿ ಕಚೇರಿಯ ಟ್ವೀಟ್ ಸಂದೇಶದಲ್ಲಿ "ಕರ್ನಾಟಕದ ಧಾರವಾಡ ಜಿಲ್ಲೆಯ ರಸ್ತೆ ಅಪಘಾತದಲ್ಲಿ ಜೀವ ಹಾನಿಯಾಗಿರುವುದು ದುಃಖಕರ ವಿಚಾರ. ಈ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.'' ಎಂದು ಹೇಳಿದ್ದಾರೆ.
0 التعليقات: