Thursday, 14 January 2021

ಹದಿನಾಲ್ಕು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ


ಹದಿನಾಲ್ಕು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಗ್ವಾಲಿಯರ್: ಹದಿನಾಲ್ಕು ವರ್ಷ ಅಪ್ರಾಪ್ತ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ 8.30ರ ಸುಮಾರಿಗೆ ಹಾಲು ತರಲು ಬಾಲಕಿ ಅಂಗಡಿಗೆ ಹೋಗಿ ಬರುತ್ತಿದ್ದಾಗ ಮೂವರು ಆರೋಪಿಗಳು ಆಕೆಯನ್ನು ಸಮೀಪದ ಉದ್ಯಾನವನಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಳಿಕ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಸದಸ್ಯರು ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆತ್ಮರಾಮ್ ಶರ್ಮಾ ತಿಳಿಸಿದ್ದಾರೆ.

ಬಾಲಕಿ 9ನೆ ತರಗತಿಯಲ್ಲಿ ಕಲಿಯುತ್ತಿದ್ದು, ಅತ್ಯಾಚಾರವೆಸಗಿದ ಆರೋಪಿಗಳಲ್ಲಿ ಓರ್ವ ಆಕೆಯ ಸಂಬಂಧಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.SHARE THIS

Author:

0 التعليقات: