Tuesday, 19 January 2021

ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ ಪ್ರಕಟ


ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಐತಿಹಾಸಿಕ ಗೆಲುವು ಪಡೆದ ಜೋಶ್ ನ ನಡುವೆ ಬಿಸಿಸಿಐ ಮುಂದಿನ ತಿಂಗಳು ನಡೆಯುವ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.

ಇಂಗ್ಲೆಂಡ್ ಭಾರತ ಪ್ರವಾಸ ಕೈಗೊಳ್ಳಲಿದ್ದು ಫೆಬ್ರವರಿ 5ರಿಂದ ಚೆನ್ನೈನಲ್ಲಿ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ 18 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದ ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಮಾತ್ರವಲ್ಲದೆ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಇಶಾಂತ್ ಶರ್ಮಾ ಚೇತರಿಸಿಕೊಂಡಿದ್ದು ತಂಡಕ್ಕೆ ಹಿಂದಿರುಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ 18ರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ನಲ್ಲಿ ಆಡಿದ ಹಲವು ಯುವ ಆಟಗಾರರು ಇಂಗ್ಲೆಂಡ್ ಎದುರಿನ ಪಂದ್ಯಕ್ಕೂ ಆಯ್ಕೆಯಾಗಿದ್ದು, ಪೃಥ್ವಿ ಶಾ ಮತ್ತು ನವದೀಪ್ ಸೈನಿ ಹೊರಗುಳಿದಿದ್ದಾರೆ.

ಇದರ ಜೊತೆಗೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮೊಹಮ್ಮದ್ ಶಮಿ, ರವಿಂದ್ರ ಜಡೇಜಾ, ಉಮೇಶ್ ಯಾದವ್ ಗೆ ವಿಶ್ರಾಂತಿ ನೀಡಲಾಗಿದೆ.

ಟೀಂ ಇಂಡಿಯಾ ಟೆಸ್ಟ್ ತಂಡ:


ರೋಹಿತ್ ಶರ್ಮಾ, ಶುಭ್ ಮನ್ ಗಿಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್, ಜಸ್ ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಆರ್ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಆಕ್ಸರ್ ಪಟೇಲ್.SHARE THIS

Author:

0 التعليقات: