Saturday, 30 January 2021

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಗಂಡನ ಮನೆಯವರಿಂದಲೇ ಕೊಲೆ ಆರೋಪ


ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಗಂಡನ ಮನೆಯವರಿಂದಲೇ ಕೊಲೆ ಆರೋಪ


ಬೆಂಗಳೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಪತಿಯ ಮನೆಯವರು ವರದಕ್ಷಿಣೆಗಾಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.


ಉಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. 2015 ರಲ್ಲಿ ಉಷಾ ಮತ್ತು ರಂಜಿತ್ ಮದುವೆಯಾಗಿದ್ದು, ಪತಿ ಕುಟುಂಬದವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದ ರಂಜಿತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಕುಟುಂಬದವರೊಂದಿಗೆ ಸೇರಿ ಕೊಲೆ ಮಾಡಿ ಆತ್ಮಹತ್ಯೆ ಕತೆ ಕಟ್ಟಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ. ವರ್ತೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.SHARE THIS

Author:

0 التعليقات: