Saturday, 16 January 2021

ನಾಳೆಯಿಂದ ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ : ಗೋ ಸಾಗಣೆಗೆ ಪರವಾನಗಿ ಕಡ್ಡಾಯ


ನಾಳೆಯಿಂದ ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ : ಗೋ ಸಾಗಣೆಗೆ ಪರವಾನಗಿ ಕಡ್ಡಾಯ

ಬೆಂಗಳೂರು : ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದೆ ಅಂತ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಸಚಿವರು ಈ ಬಗ್ಗೆ ತಿಳಿಸಿದ್ದು, ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ತಿಳಿಸಲಾಗಿದೆ. ಸಾರ್ವಜನಿಕರು ಉದ್ವೇಗದಲ್ಲಿ ಕಾನೂನನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು ಎಂದು ಸಚಿವರು ತಿಳಿಸಿದ್ದಾರೆ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಇನ್ನು ರೈತರು ಕೃಷಿ ಉದ್ದೇಶಕ್ಕಾಗಿ ಸ್ಥಳೀಯವಾಗಿ 15 ಕಿಲೋ ಮೀಟರ್ ದೂರದವರೆಗೆ ಪರವಾನಗಿ ಇಲ್ಲದೆ ಎರಡು ಹಸು ಮತ್ತು ಎರಡು ಕರುಗಳನ್ನು ಮಾತ್ರ ಕೊಂಡೊಯ್ಯಬಹುದು. ರಾತ್ರಿ ವೇಳೆ ಗೋವುಗಳ ಸಾಗಣೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಕೃಷಿ ಅಥವಾ ಪಶುಸಂಗೋಪನೆಯ ಉದ್ದೇಶಕ್ಕೆ ಹಸು, ಕರು, ಎತ್ತು, ಎಮ್ಮೆ ಕೋಣಗಳನ್ನು ಸಾಗಿಸುವಾಗಲೂ ಸಾಗಣೆಯ ಪರವಾನಗಿ ಹೊಂದಿರಬೇಕಾದುದು ಕಡ್ಡಾಯವಾಗಿದೆ.


SHARE THIS

Author:

0 التعليقات: