Wednesday, 20 January 2021

ನೂತನ ಸಚಿವರಿಗೆ ಖಾತೆ ಹಂಚಿಕೆ; ಹಲವು ಬದಲಾವಣೆ; ರಾಜ್ಯಪಾಲರ ಗ್ರೀನ್ ಸಿಗ್ನಲ್


 ನೂತನ ಸಚಿವರಿಗೆ ಖಾತೆ ಹಂಚಿಕೆ; ಹಲವು ಬದಲಾವಣೆ; ರಾಜ್ಯಪಾಲರ ಗ್ರೀನ್ ಸಿಗ್ನಲ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಗೊಂಡ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು ಪಟ್ಟಿ ಬಿಡುಗಡೆಯಾಗಿದೆ. ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಿ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದ್ದು ರಾಜ್ಯ ಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.


ನೂತನ ಸಚಿವರ ಖಾತೆ ಹಂಚಿಕೆ ವಿವರ ಇಂತಿದೆ:

ಸಿ.ಪಿ.ಯೋಗೇಶ್ವರ್ - ಸಣ್ಣ ನೀರಾವರಿ
ಆರ್. ಶಂಕರ್ - ಪೌರಾಡಳಿತ
ಎಂಟಿವಿ ನಾಗರಾಜ್ - ಅಬಕಾರಿ
ಮುರುಗೇಶ್ ನಿರಾಣಿ - ಖನಿಜ, ಗಣಿ ಮತ್ತು ಭೂ ವಿಜ್ಞಾನ
ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆ
ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
ಅರವಿಂದ ಲಿಂಬಾವಳಿ - ಅರಣ್ಯ
ನಾರಾಯಣಗೌಡ - ಯುವಜನ ಮತ್ತು ಕ್ರೀಡೆ
ಸಿ. ಗೋಪಾಲಯ್ಯ - ತೋಟಗಾರಿಕೆ ಇಲಾಖೆ
ಆನಂದ್ ಸಿಂಗ್ - ಪ್ರವಾಸೋದ್ಯಮ
ಶಿವರಾಂ ಹೆಬ್ಬಾರ್ - ಕಾರ್ಮಿಕ
ಪ್ರಭು ಚವ್ಹಾಣ್ - ಪಶುಸಂಗೋಪನೆ
ಕೆ.ಸುಧಾಕರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಬಸವರಾಜ ಬೊಮ್ಮಾಯಿ - ಗೃಹ ಮತ್ತು ಕಾನೂನು
ಜೆ.ಸಿ. ಮಾಧುಸ್ವಾಮಿ - ವೈದ್ಯಕೀಯ ಶಿಕ್ಷಣ
ಸಿ.ಸಿ. ಪಾಟೀಲ್ - ಸಣ್ಣ ಕೈಗಾರಿಕೆ
ಕೋಟ ಶ್ರೀನಿವಾಸ ಪೂಜಾರಿ - ಮುಜರಾಯಿ

ಸಚಿವ ಮಾಧುಸ್ವಾಮಿಯವರಿಂದ ಕಾನೂನು ಖಾತೆ ಹಿಂಪಡೆದು ಬಸವಜರಾಜ ಬೊಮ್ಮಾಯಿ ಅವರಿಗೆ ಗೃಹ ಖಾತೆ ಜೊತೆಗೆ ಹೆಚ್ಚುವರಿಯಾಗಿ ಕಾನೂನು ಖಾತೆ ನೀಡಲಾಗಿದೆ. ಕೆ.ಸುಧಾಕರ್ ಅವರಿಂದ ವೈದ್ಯಕೀಯ ಶಿಕ್ಷಣ ಖಾತೆ ಹಿಂಪಡೆದು ಮಾಧುಸ್ವಾಮಿಗೆ ನೀಡಲಾಗಿದೆ.


SHARE THIS

Author:

0 التعليقات: