ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆ: ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಹೆಸರನ್ನು ಹೆಸರು ಅಂತಿಮಗೊಳಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಸಮಾಲೋಚನಾ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಯಿತು.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಶಾಸಕ ದಿವಂಗತ ನಾರಾಯಣ ರಾವ್ ಪತ್ನಿ ಮಲ್ಲಮ್ಮ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಹೆಸರು ಅಂತಿಮಗೊಳಿಸಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಮೂರು ಹೆಸರು ಅಂತಿಮಪಡಿಸಲಾಗಿದೆ. ಶಾಸಕ ಸತೀಶ್ ಜಾರಕಿಹೋಳಿ, ಪ್ರಕಾಶ್ ಹುಕ್ಕೇರಿ ಹಾಗೂ ಚನ್ನರಾಜು ಹೆಸರು ಕಾಂಗ್ರೆಸ್ ಅಂತಿಮಗೊಳಿಸಿದೆ. ಸತೀಶ್ ಜಾರಕಿಹೋಳಿ ಅವರನ್ನೇ ಅಭ್ಯರ್ಥಿಯನ್ನಾಗಿಸಲು ರಾಜ್ಯದ ಹೆಚ್ಚಿನ ನಾಯಕರು ಒಲವು ತೋರಿದ್ದಾರೆ.
ಈ ಹೆಸರುಗಳನ್ನು ಹೈ ಕಮಾಂಡ್ ಗೆ ಕಳುಹಿಸಲು ತೀರ್ಮಾನ ಮಾಡಲಾಗಿದೆ. ಬಳಿಕ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಸಲಾಗುತ್ತದೆ.
0 التعليقات: